ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ರೂಪಾಂತರಿ ವೈರಸ್ ಬಗ್ಗೆ ಎಚ್ಚರಿಕೆ ಬೆನ್ನಲ್ಲೇ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೂ ಅನಿಶ್ಚಿತತೆ ಕಾಡುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಮೇಲೆ ಅಧಿವೇಶನದ ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ.
ಒಮಿಕ್ರಾನ್ ಪ್ರಭೇದದ ರೂಪಾಂತರ ವೈರಸ್ ಜಗತ್ತಿಗೆ ಮತ್ತೊಮ್ಮೆ ಆತಂಕವನ್ನು ಸೃಷ್ಟಿಸುತ್ತಿದ್ದು, ರಾಜ್ಯದಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಸಂಪುಟ ಸದಸ್ಯರ ಸಲಹೆ ಪ್ರಕಾರ ರಾಜ್ಯದಿಂದ ಮಾರ್ಗಸೂಚಿ ತಯಾರಾಗಲಿದೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ನಿಯಮ ಅಡ್ಡಿಯಾದರೆ ಅಧಿವೇಶನ ಅನುಮಾನ ಎನ್ನಲಾಗುತ್ತಿದೆ.
ಇನ್ನು ದೇಶಾದ್ಯಂತ ಒಮಿಕ್ರಾನ್ ವೈರಸ್ ಅಲರ್ಟ್ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವಿದೇಶಿ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಶ್ರೀನಿವಾಸ್ ಸೂಚಿಸಿದ್ದಾರೆ.
ಆತಂಕ ಹೆಚ್ಚಿಸಿದ ಹೊಸ ರೂಪಾಂತರಿ ವೈರಸ್; ವೇಗವಾಗಿ ಹರಡುತ್ತೆ ‘ಒಮಿಕ್ರೋನ್’ ವೈರಾಣು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ