ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಗಡಿಯಲ್ಲಿ ತೀವ್ರ ಕಟ್ಟೆಚ್ಚರಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿಯ 23 ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ 200 ಜನರ ಥ್ರೋಟ್ ಸ್ವ್ಯಾಬ್ ಸಂಗ್ರಹ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ತೀವ್ರ ನಿಗಾ ಇಡಲಾಗಿದೆ. ಕಳೆದ 16 ದಿನಗಳಲ್ಲಿ ಹೊರರಾಜ್ಯ, ಜಿಲ್ಲೆಗಳಿಂದ ಬಂದವರ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳ, ಮಹಾರಾಷ್ಟ್ರ ಸೇರಿ ಹೊರ ರಾಜ್ಯಗಳಿಂದ ಬೆಳಗಾವಿಗೆ ಒಟ್ಟು 293 ವಿದ್ಯಾರ್ಥಿಗಳು ಬೆಳಗಾವಿಯ ವಿವಿಧ ಶಿಕ್ಷಣ ಸಂಸ್ಥೆಗಳು, ಹಾಸ್ಟೇಲ್‌ಗೆ ಆಗಮಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಎಸ್ ಡಿಎಂ ನಲ್ಲಿ ಕೊರೊನಾ ಸ್ಫೋಟ; ಮತ್ತೆ 25 ಜನರಿಗೆ ವೈರಸ್ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ