Latest

ರಾಜ್ಯಕ್ಕೆ ಒಮಿಕ್ರಾನ್ ಎಂಟ್ರಿ ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ಬೆನ್ನಲ್ಲೇ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಸದ್ದಿಲ್ಲದೇ ಎಂಟ್ರಿ ಕೊಟ್ಟಿದೆಯೇ ಎಂಬ ಆತಂಕ ಎದುರಾಗಿದೆ.

ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಆಗಮಿಸಿರುವ ಇಬ್ಬರ ಪೈಕಿ ಓರ್ವವರಲ್ಲಿ ಡೆಲ್ಟಾ ಗಿಂತ ಭಿನ್ನವಾದ ವೈರಸ್ ಪತ್ತೆಯಾಗಿದ್ದು, ಇದೀಗ ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ಭೀತಿ ಶುರುವಾಗಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ 63 ವರ್ಷದ ವ್ಯಕ್ತಿಯೊಬ್ಬರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯ ಲ್ಯಾಬ್ ವರದಿ ಇಂದು ಬರಲಿದ್ದು, ಸಂಜೆ ವೇಳೆಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಐಸಿ ಎಂ ಆರ್ ಜೊತೆ ನಾನು ಕೂಡ ನಿಕಟ ಸಂಪರ್ಕದಲ್ಲಿದ್ದೆನೆ. ಸೋಂಕಿತನಲ್ಲಿ ಪತ್ತೆಯಾಗಿರುವ ವೈರಸ್ ಯಾವುದು ಎಂಬುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಒಟ್ಟಾರೆ ರಾಜ್ಯದಲ್ಲಿಯೂ ಹೊಸ ರೂಪಾಂತರಿ ವೈರಸ್ ಭೀತಿ ಆರಂಭವಾಗಿದ್ದು, ತಜ್ಞರ ಎಚ್ಚರಿಕೆಯಂತೆಯೇ ಡಿಸೆಂಬರ್, ಜನವರಿ ವೇಳೆಗೆ ಕೋವಿಡ್ ಮೂರನೇ ಅಲೆ ನಿಜಕ್ಕೂ ಅಪ್ಪಳಿಸಲಿದೆಯೇ ಎಂಬ ಆತಂಕ ಶುರುವಾಗಿದೆ.

ಲಾಕ್ ಡೌನ್ ವಿಚಾರ; ಖಡಕ್ ಎಚ್ಚರಿಕೆ ನೀಡಿದ ಸಚಿವ ಸುಧಾಕರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button