
ಪ್ರಗತಿವಾಹಿನಿ ಸುದ್ದಿ, ಅಂಕೋಲಾ: ಇಲ್ಲಿನ ಬಾಳೇಗುಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ೋನ್ಮಿ ವಾಹನಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ವಾಹನ ಚಲಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಾಲಕ ತಕ್ಷಣ ನಿಲ್ಲಿಸಿದ್ದಾರೆ. ವಾಹನ ನಿಂತ ತಕ್ಷಣವೇ ಭುಗಿಲೆದ್ದು ಇಡೀ ವಾಹನವನ್ನೇ ಆಕ್ರಮಿಸಿಕೊಂಡಿತು.
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದರು. ಆದರೆ ಅಷ್ಟರಲ್ಲೇ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.
ನಡು ಹೆದ್ದಾರಿಯಲ್ಲಿ ವಾಹನ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಇತರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ