ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ –
ಶಿಕ್ಷಣ ಸಂಸ್ಥೆಗಳ ಸ್ಥಾಪನೆಯ ಮೂಲಕ ದೇಶ ವಿದೇಶಗಳಲ್ಲೂ ಕನ್ನಡದ ಕಂಪು ಹರಡಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ೭೫ನೇ ಹುಟ್ಟು ಹಬ್ಬದ ಅಮೃತ ಮಹೋತ್ಸವ ಅಂಗವಾಗಿ ನ.೧೧ರಂದು ಬೆಳಗಾವಿಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ಬೆಳಗಾವಿಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದ ಆರ್. ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ನ.೧೧ ರಂದು ಬೆಳಗ್ಗೆ ೧೦.೩೦ ಗಂಟೆಗೆ ಅಭಿನಂದನಾ ಸಮಾರಂಭ ಜರುಗಲಿದೆ. ಇದೇ ವೇಳೆ ಶಿಕ್ಷಣ ಸಂಸ್ಥೆಗಳು ಮತ್ತು ಮಠಾಧೀಶರು ಎಂಬ ವಿಷಯದ ಕುರಿತು ಮಠಾಧೀಶರ ಚಿಂತನಾ ಸಮಾವೇಶ ಏರ್ಪಡಿಸಲಾಗಿದೆ. ೨೦೦ಕ್ಕೂ ಹೆಚ್ಚು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
ಸಿರಿಗೆರೆಯ ತರಳಬಾಳು ಮಹಾಸಂಸ್ಥಾನ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸುತ್ತೂರು ಜಗದ್ಗುರು ವೀರಸಿಂಹಾಸನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮುಂಡರಗಿ ಅನ್ನದಾನೇಶ್ವರ ಸಂಸ್ಥಾನಮಠದ ಡಾ.ಅನ್ನದಾನೇಶ್ವರ ಸ್ವಾಮೀಜಿ, ಶಿವಮೊಗ್ಗ ಆನಂದಪುರ ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಹಾಲಕರೆ ಕೊಟ್ಟೂರು ಸ್ವಾಮಿ ಮಠದ ಕೊಟ್ಟೂರು ಬಸವಲಿಂಗ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸುವರು.
ಸೊಲ್ಲಾಪುರ ಹಿರೇಮಠ ಹಾಗೂ ಗೌಡಗಾಂವ ಸಂಸದರಾಗಿರುವ ಡಾ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಹಿರಿಯ ಸಾಹಿತಿ ಡಾ.ಗೊ.ರು.ಚನ್ನಬಸಪ್ಪ ಆಶಯ ನುಡಿ ಹೇಳುವರು ಎಂದು ಸ್ವಾಮೀಜಿ ವಿವರಿಸಿದರು.
ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಡಾ.ಪ್ರಭಾಕರ ಕೋರೆ ಅವರನ್ನು ಗೌರವಿಸುವ ಮೂಲಕ ಅವರ ಆದರ್ಶಗಳನ್ನು ಸಮಾಜ ಹಾಗೂ ಯುವ ಜನಾಂಗದಲ್ಲಿ ಬಿತ್ತುವುದೇ ಅಭಿನಂದನಾ ಸಮಾರಂಭದ ಮುಖ್ಯ ಉದ್ದೇಶವಾಗಿದೆ. ಅಲ್ಲದೆ, ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠಗಳು ಮತ್ತು ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದಾಗಿದ್ದು, ಇವುಗಳಿಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಚಿಂತನಾ ಸಭೆ ಆಯೋಜಿಸಲಾಗಿದೆ ಎಂದರು. ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಇದ್ದರು.
ವಸತಿ ಶಾಲೆ ಮಕ್ಕಳೊಂದಿಗೆ ಕೆಲ ಹೊತ್ತು ಜಾಲಿಯಾಗಿ ಕಳೆೆದ CM
https://pragati.taskdun.com/latest/the-cm-spent-some-time-with-the-residential-school-children/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ