
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.
ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ ರೂ. ಆಭರಣ ವಶಪಡಿಸಿಕೊಂಡಂತಾಗಿದೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಎಸ್ಪಿ ಸಂಜೀವ ಪಾಟೀಲ ಅವರು ಕರ್ತವ್ಯ ನಿರತ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ