*ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ಒಂದು ದಿನದ ಕಾರ್ಯಾಗಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಎಲ್ಲರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಯಕರ್ತರು ಅವುಗಳನ್ನು ಜನರ ಬಳಿಕ ತಲುಪಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಜಿ.ಎಸ್ ಹೇಳಿದರು.
ಸೋಮವಾರದಂದು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ವಿಭಾಗಮಟ್ಟದ ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರವನ್ನು ಉದ್ಧೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಜಿ.ಎಸ್. ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಎಲ್ಲರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಯಕರ್ತರು ಅವುಗಳನ್ನು ಜನರ ಬಳಿಕ ತಲುಪಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕೆಂದರು. ಅಲ್ಲದೇ ಜಿಲ್ಲೆಯ ಕಾರ್ಮಿಕರ ಸಮಸ್ಯೆಗಳು ತಾವು ಅರಿತಿದ್ದು ಅವುಗನ್ನು ಬಗೆಹರಿಸಲು ಕಾರ್ಮಿಕ ಸಚಿವರ ಗಮನಸೆಳೆಯುವುದಾಗಿ ತಿಳಿಸಿದರು.
ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಜಿ.ಎಸ್, ಉಪಾಧ್ಯಕ್ಷ ದಿನಕರ, ಪ್ರಧಾನ ಕಾರ್ಯದರ್ಶಿ ನಾಗರಾಜ್, ಜಿಲ್ಲಾಧ್ಯಕ್ಷರಾದ ಶಶಿಧರ ಚಿಕ್ಕೋಡಿ ಉಪಸ್ಥಿತರಿದ್ಧರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ