ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಈವರೆಗೆ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಒಂದೇ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ.
ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕವೇ ಮಾಡುವಂತೆ ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ