Kannada NewsKarnataka NewsLatest

ರಮೇಶ್ ಜಾರಕಿಹೊಳಿಗೆ ಶಾಕ್ ಮೇಲೆ ಶಾಕ್ ; ಹೈಕೋರ್ಟ್ ನ್ಯಾಯಾಧೀಶರಿಗೆ ಯುವತಿ ಪತ್ರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ದಿನಕ್ಕೊಂದು ಹೊಸ ಹೊಸ ತಿರುವು ಸಿಗುತ್ತಿದ್ದು, ದಿನದಿಂದ ದಿನಕ್ಕೆ ಮಾಜಿ ಸಚಿವರಿಗೆ ಸಂಕಷ್ಟ ಹೆಚ್ಚಾಗುತ್ತಿದೆ.

ಸಿಡಿಯಲ್ಲಿರುವ ಯುವತಿ ಇದೀಗ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರವೊಂದನ್ನು ಬರೆದಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಹಲವಾರು ಗುರುತರ ಆರೋಪಗಳನ್ನು ಮಾಡಿದ್ದಾಳೆ. ರಮೇಶ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ನನಗೆ ಜೀವಬೆದರಿಕೆ ಹಾಕಿದ್ದಾರೆ. ನನ್ನ ಪಾಲಕರನ್ನು ಒತ್ತೆಯಾಗಿಟ್ಟುಕೊಂಡಿದ್ದಾರೆ. ಅವರಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ. ಪ್ರಕರಣವನ್ನು ಮುಚ್ಚಿಹಾಕಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೆ ಹಲವಾರು ಸಾಕ್ಷಿಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾಳೆ.

ನಾನು ಸಂತ್ರಸ್ತೆಯಾಗಿದ್ದು, ತಮ್ಮ ಮಾರ್ಗದರ್ಶನದಲ್ಲೇ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ನನಗೆ ನ್ಯಾಯ ಸಿಗುವುದಿಲ್ಲ ಎಂದೂ ಕೇಳಿದ್ದಾಳೆ.

ಹೈಕೋರ್ಟ್ ನ್ಯಾಯಾಧೀಶರಿಗೆ ಇ ಮೇಲ್ ಮೂಲಕ ಪತ್ರ ರವಾನಿಸಲಾಗಿದೆ.

Home add -Advt

ಈ ಮಧ್ಯೆ, ಇಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗುವಂತೆ ರಮೇಶ ಜಾರಕಿಹೊಳಿಗೆ ನೋಟೀಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿಗೆ ವಿನಂತಿಸಿದ್ದೇನೆ ಎಂದು ಸಹೋದರ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಇದೀಗ ಹೈಕೊರ್ಟ್ ನ್ಯಾಯಾಧೀಶರಿಗೆ ಯುವತಿ ಸ್ವತಃ ಪತ್ರ ಬರೆದಿರುವುದರಿಂದ ಪ್ರಕರಣ ಇನ್ನಷ್ಟು ಗಂಭೀರವಾಗಿದೆ. ಇದೇ ವೇಳೆ ಇಂದು ಯುವತಿ ಸ್ವತಃ ಇಂದು ನ್ಯಾಯಾಧೀಶರ ಮುಂದೆ ಹಾಜರಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

Related Articles

Back to top button