Karnataka NewsNationalTravel

*ಕುಂಭಮೇಳಕ್ಕೆ ವಿಶೇಷ ರೈಲು*

ಪ್ರಗತಿವಾಹಿನಿ ಸುದ್ದಿ: ಕುಂಭಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ ರೈಲು (06221) ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. 

ಮೈಸೂರು-ಲಕ್ನೋ ಏಕಮಾರ್ಗ ವಿಶೇಷ ರೈಲು (06221) ಶುಕ್ರವಾರ (ಫೆ.14, 2025) ಬೆಳಿಗ್ಗೆ 7:30 ಗಂಟೆಗೆ ಮೈಸೂರಿನಿಂದ ಹೊರಟು, ಭಾನುವಾರದಂದು ( ಫೆ.16, 2025) ಸಂಜೆ 4:00 ಗಂಟೆಗೆ ಲಕ್ನೋ ನಿಲ್ದಾಣವನ್ನು ತಲುಪಲಿದೆ. 

ಈ ರೈಲಿನಲ್ಲಿ 1 ಎಸಿ ತ್ರಿ ಟೈರ್, 8 ಸ್ಲೀಪರ್ ಕ್ಲಾಸ್, 10 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ. ಈ  ರೈಲು ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಕಟ್ನಿ, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್ ಚಿಯೋಕಿ ಮತ್ತು ವಾರಾಣಸಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ

ಈ ರೈಲಿನ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button