Belagavi NewsBelgaum NewsKannada NewsKarnataka News
*ಒಂದು ವಾರ ಮಳೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ.
ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಜೋರು ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.




