Kannada NewsKarnataka NewsPolitics

*ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ: ಸಂಭ್ರಮಾಚರಣೆಗೆ ನೀತಿ ಸಂಹಿತೆ ಅಡ್ಡಿ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣವಾಗಲಿದೆ‌. ಆದರೆ ಸರ್ಕಾರ ತನ್ನ ಮೊದಲ ವರ್ಷದ ಸಂಭ್ರಮಾಚರಣೆ ಮಾಡಲು ನೀತಿ ಸಂಹಿತೆ ಅಡ್ಡಿಯಾಗಿದೆ.

Home add -Advt

ನಾಳೆ(ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಲಿದೆ. ಆದರೆ, ಸರ್ಕಾರದ ಒಂದು ವರ್ಷದ ಸಂಭ್ರಮಾಚರಣೆ ಮಾಡಲು ಲೋಕಸಭಾ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಹೀಗಾಗಿ ನೀತಿ ಸಂಹಿತೆ ಮುಗಿದ ಬಳಿಕ ಸಂಭ್ರಮಾಚರಣೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ನಾಳೆ ಸಿಎಂ ಸಿದ್ದರಾಮಯ್ಯ ಮಾಧ್ಯಮಗೋಷ್ಠಿ ನಡೆಸಿ ಸರ್ಕಾರದ ಒಂದು ವರ್ಷದ ಕಾರ್ಯವೈಖರಿ ಬಗ್ಗೆ ತಿಳಿಸಲಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಒಂದು ವರ್ಷದಲ್ಲಿ ಏನೆಲ್ಲಾ ಮಾಡಿದ್ದಾರೆ ಎನ್ನುವುದನ್ನು ಜನತೆ ಮುಂದೆ ಬಿಚ್ಚಿಡಲಿದ್ದಾರೆ.

Related Articles

Back to top button