
ಪ್ರಗತಿವಾಹಿನಿ ಸುದ್ದಿ: ಮನೆ ಮುಂದಿನ ಚರಂಡಿಗೆ ಬಿದ್ದು ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಎಪಿಎಂಸಿ ಹಮಾಲರ ಕಾಲೋನಿಯಲ್ಲಿ ನಡೆದಿದೆ.
ಪವಿತ್ರ ಮೃತ ಮಗು. ಬೆಳಿಗ್ಗೆ ಮನೆ ಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದಿದೆ. ಮಧ್ಯಾಹ್ನ ಮಗುವಿನ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ.
ಚರಂಡಿಯನ್ನು ಮುಚ್ಚದೆ ಬೇಜವಾಬ್ದಾರಿ ಮೆರೆದಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ನಗರಸಭೆ ಕಚೇರಿ ಮುಂದೆ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ