CrimeKannada NewsKarnataka NewsLatest
*ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಈರುಳ್ಳಿ ಲಾರಿ*: *ಚಾಲಕ, ಕ್ಲೀನರ್ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಈರುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಕ್ಕೆ ಉರುಳಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ.
ಲಾರಿ ಹೊಸಪೇಟೆ ಕಡೆಯಿಂದ ಕುಷ್ಟಗಿ ಕಡೆಗೆ ಈರುಳ್ಳಿ ಲೋಡ್ ಮಾಡಿಕೊಂಡು ತೆರಳುತ್ತಿತ್ತು. ಈ ವೇಳೆ ಕೊಪ್ಪಳ ತಾಲೂಕಿನ ಮುನಿರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದಿದೆ.
ಅಪಘಾತದಲ್ಲಿ ಗಾಯಗೊಂಡ ಚಾಲಕ ಮತ್ತು ಕ್ಲೀನರ್ನನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




