Belagavi NewsBelgaum NewsKannada NewsKarnataka NewsNationalPolitics

*ಹಬ್ಬದ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹಾಗಾಗಿ ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚಿಗೆ ಆಗಲಿದೆ. 

ಎಪಿಎಂಸಿಗಳಲ್ಲಿ ಸದ್ಯ 45-50 ರೂಪಾಯಿಗೆ ಮಾರಾಟವಾಗುತ್ತಿರುವ ಈರುಳ್ಳಿ ಮಾರುಕಟ್ಟೆಯಲ್ಲಿ 55-60 ಹಾಗೂ ಗುಣಮಟ್ಟದ ಇರುಳ್ಳಿ 70 ರೂಪಾಯಿ ಒಂದು ಕೆಜಿ ವರೆಗೆಗೂ ಮಾರಾಟವಾಗಲಿದೆ.‌ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದ್ದು,‌ ಬೆಲೆ ಏರಿಕೆಯಾಗಿದೆ. 

ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button