Latest

ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳು ಬಾಗಿಲು ಮುಚ್ಚಿದ್ದು, ಈ ಹಿನ್ನಲೆಯಲ್ಲಿ ಆನ್ ಲೈನ್ ಶಿಕ್ಷಣಕ್ಕೆ ಆದ್ಯತೆ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಆದರೆ ಕೆಲವರು ಆನ್ ಲೈನ್ ಶಿಕ್ಷಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆನ್ ಲೈನ್ ಶಿಕ್ಷಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ. ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್‌ಗಳೆಲ್ಲಿಂದ ಬರಬೇಕು? ಪೋನ್ ಇದ್ದರೂ ನೆಟ್‌ವರ್ಕ್ ಎಲ್ಲಿದೆ? ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ? ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್‌ಲೈನ್ ತರಗತಿಗಳ ಮೂಲಕ ನೀಡುವ ಪ್ರಸ್ತಾವ, ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ! ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button