Latest

*ಮೊಬೈಲ್ ಗೆ ಬರುವ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ*

ಆನ್ ಲೈನ್ ಸಂದೇಶ ನೋಡಿ ಲಕ್ಷ ಲಕ್ಷ ಹಣ ಕಳೆದುಕೊಂಡ ಪ್ರಾಧ್ಯಾಪಕ

Related Articles


ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಗ್ರಾಹಕರು ಎಷ್ಟೇ ಎಚ್ಚರವಹಿಸಿದರೂ ಕಡಿಮೆ. ಅಪರಿಚಿತ ಸಂಖ್ಯೆಯಿಂದ ಬರುವ ಎಸ್ ಎಂ ಎಸ್, ಲಿಂಕ್ ಗಳನ್ನು ಕ್ಲಿಕ್ ಮಾಡುತ್ತಿದ್ದಂತೆಯೇ ಅಕೌಂಟ್ ನಿಂದ ಹಣ ಡ್ರಾ ಆಗಿ ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ.

ಇಲ್ಲೋರ್ವ ಪ್ರಾಧ್ಯಾಪಕರು ಹೆಚ್ ಡಿ ಎಫ್ ಸಿ ಬ್ಯಾಂಕ್ ಹೆಸರಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಹೆಚ್ ಡಿ ಎಫ್ ಸಿ ಬ್ಯಾಂಕ್ ಆನ್ ಲೈನ್ ಸರ್ವಿಸ್ ಲಿಂಕ್ ಹೆಸರಲ್ಲಿ ಅಪರಿಚಿತ ವಾಟ್ಸಾಪ್ ಸಂಖ್ಯೆಯಿಂದ ಮೆಸೇಜ್ ಬಂದಿದ್ದು, ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿದರೆ ಶೇ.5-6ರಷ್ಟು ಲಾಭ ಪಡೆಯಬಹುದು ಎಂದು ಸಂದೇಶದಲ್ಲಿ ತಿಳಿಸಲಾಗಿತ್ತು. ವಂಚಕರು ಕಳುಹಿಸಿದ ಫಾರಂ ಭರ್ತಿ ಮಾಡಿ ತಮ್ಮ ಬ್ಯಾಂಕ್ ಖಾತೆ ವಿವರ ನೀಡಿದ ಪ್ರಾಧ್ಯಾಪಕರು ಹಣ ಕಳೆದುಕೊಂಡಿದ್ದಾರೆ.

ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 12,69,101 ರೂ ಹಣ ಡ್ರಾ ಆಗಿದೆ. ಜುಲೈ 4ರಿಂದ ಆಗಸ್ಟ್ 6ರವರೆಗೆ ಎಲ್ಲಾ ಹಣವೂ ವಂಚಕರ ಖಾತೆಗೆ ವರ್ಗಾವಣೆಯಾಗಿದೆ. ಹೂಡಿಕೆ ಮಾಡಿದ ಹಣವೂ ಇಲ್ಲ, ಕಮಿಷನ್ ಕೂಡ ಇಲ್ಲದಿದ್ದಾಗ ಪ್ರಾಧ್ಯಾಪಕರಿಗೆ ತಾನು ಮೋಸ ಹೋಗಿದ್ದು ಅರಿವಾಗಿದೆ. ತಕ್ಷಣ ರಾಮನಗರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button