ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಗೇಮಿನ ಗೀಳಿಗೆ ಯುವಕರು ಬಲಿಯಾಗುತ್ತಿರುವ ಘಟನೆ ಹೆಚ್ಚುತ್ತಿದೆ. ಆನ್ ಲೈನ್ ಗೇಮ್ ನಿಂದ ಹಣ ಕಳೆದುಕೊಂಡಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
25 ವರ್ಷದ ವಿಜಯ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡದ ನಿವಾಸಿಯಾಗಿದ್ದ ಯುವಕ, ಆನ್ ಲೈನ್ ಗೇಮ್ ನಲ್ಲಿ ಹಣ ತೊಡಗಿಸಿ ಕಳೆದುಕೊಂಡಿದ್ದ. ಆನ್ ಲೈನ್ ಗೇಮ್ ಸುಳಿಗೆ ಸಿಲುಕಿ ಸಾಲ ಮಾಡಿಕೊಂಡಿದ್ದ.
ಇದರಿಂದ ಮನ್ನೊಂದ ಯುವಕ ಮೈಮೇಲೆ ಪೆಟ್ರೋ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ