ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆನ್ ಲೈನ್ ಗೇಮಿಂಗ್, ಗ್ಯಾಂಬ್ಲಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್ ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಗೆ ಅವಕಾಶ ನೀಡಿದೆ.
ಅಕ್ಟೋಬರ್ 10ರಂದು ರಾಜ್ಯ ಸರ್ಕಾರ ಆನ್ ಲೈನ್ ಗೇಮಿಂಗ್ ನಿಷೇಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಕ್ರಮ ಸಂವಿಧಾನ ಬದ್ಧವಲ್ಲ, ಆನ್ ಲೈನ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಸರ್ಕಾರದ ಆದೇಶ ರದ್ದು ಮಾಡಿದೆ.
ರಾಜ್ಯದಲ್ಲಿ ಅಕ್ಟೋಬರ್ 10ರಿಂದ ಆನ್‌ಲೈನ್ ಗೇಮ್ ನಿಷೇಧಿಸಿಸಿದ್ದ ಸರ್ಕಾರ, ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆಪ್ಗಳನ್ನು ಸ್ಥಗಿತಗೊಳಿಸಿತ್ತು.
ಹಿಜಾಬ್ ಧರಿಸಿ ಅಧಿವೇಶನಕ್ಕೆ ಬಂದ ಶಾಸಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ