ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಕೆ ಎಲ್ ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ, ಎಂಜಿನಿಯರಿಂಗ್ ಆಕಾಂಕ್ಷಿಗಳ ಅನುಕೂಲಕ್ಕಾಗಿ ಕೆಎಲ್‌ಎಸ್ ಜಿಐಟಿ ಆನ್‌ಲೈನ್ ಮೋಕ್ ಸಿಇಟಿ ೨೦೨೦ ನಡೆಸಲಾಯಿತು.
೫೦೦ ಕ್ಕೂ ಹೆಚ್ಚು ಎರಡನೇ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಸಾಹಿಲ್ ಹಲ್ಗೆಕರ್ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ೮೨.೨೨% ರೊಂದಿಗೆ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಪ್ರಜ್ವಲ್ ೭೯.೪೪% ಅಂಕಗಳೊಂದಿಗೆ ಎರಡನೇ ಸ್ಥಾನ ಮತ್ತು ತನ್ಮಯ್ ದೇಶಪಾಂಡೆ ೭೩.೩೩% ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು.
ಕೆಎಲ್‌ಎಸ್ ಅಧ್ಯಕ್ಷ ಪಿ ಎಸ್ ಸಾವಕಾರ, ಕೆಎಲ್‌ಎಸ್ ಜಿಐಟಿ ಜಿಸಿ ಅಧ್ಯಕ್ಷ ಎಂ. ಆರ್. ಕುಲಕರ್ಣಿ, ಪ್ರಾಂಶುಪಾಲ ಡಾ.ಜಯಂತ್ ಕೆ ಕಿತ್ತೂರ ಮತ್ತು ಎಲ್ಲಾ ಅಧ್ಯಾಪಕ ಸದಸ್ಯರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ ಮತ್ತು ಅವರ ಕೆಸಿಇಟಿ ೨೦೨೦ ಪರೀಕ್ಷೆಗಳಿಗೆ ಶುಭ ಹಾರೈಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ