Kannada NewsKarnataka NewsLatestPolitics

*ಕೇರಳದ ಮಾಜಿ ಸಿಎಂ ಉಮನ್ ಚಾಂಡಿ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಕೇರಳದ ಮಾಜಿ ಸಿಎಂ ಉಮಾನ್ ಚಾಂಡಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Home add -Advt

ಉಮಾನ್ ಚಾಂಡಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಅವರು ಜನಸೇವೆ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನ ಕೇರಳ ರಾಜ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನಷ್ಟ ಉಂಟು ಮಾಡಿದೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

Back to top button