National

*ಆಪರೇಷನ್ ಕೆಲ್ಲರ್ ಯಶಸ್ವಿ: ಪಹಲ್ಗಾಮ್ ದಾಳಿಯ ಉಗ್ರ ಸಂಘಟನೆಯ ಮುಖ್ಯಸ್ಥನ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೇನೆ ನಡೆಸಿದ ಆಪರೇಷನ್ ಕೆಲ್ಲರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಈ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ಶೋಕಲ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ರಾಷ್ಟ್ರೀಯ ರೈಫಲ್ ಘಟಕದ ನಿಖರ ಗುಪ್ತಚರ ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆ ಇಂದು ಆಪರೇಷನ್ ಕೆಲ್ಲರ್ ಕಾರ್ಯಾಚರಣೆ ನಡೆಸಿತ್ತು.

ಈ ಕಾರ್ಯಾಚರಣೆಯಲ್ಲಿ ಪಹಲ್ಗಾಮ್ ದಾಳಿಯ ಹಿಂದಿರುವ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾದ ಉಪಸಂಘಟನೆಟಿಆರ್ ಎಫ್ ಮುಖ್ಯಸ್ಥ ಶಾಹಿದ್ ಕುಟ್ಟೆಯನ್ನು ಭದ್ರತಾಪಡೆಗಳು ಹೊಡೆದುರುಳಿಸಿದ್ದಾರೆ. ಇದೇ ವೇಳೆ ಇನ್ನೂ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button