*ಅಸಮಾಧಾನದ ಪತ್ರ ಬರೆದ ಶಾಸಕರಿಗೆ ಹೆದರಿಸಲು ’ಆಪರೇಷನ್’ ತಂತ್ರ; ಕೈ ನಾಯಕರಿಗೆ ಅದರ ಅವಶ್ಯಕತೆಯೇ ಇಲ್ಲ ಎಂದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆದರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು.
ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಾಲಚಂದ್ರ ಜಾರಕಿಹೊಳಿ, ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು ಎಂದು ದೊಡ್ಡ ದೊಡ್ಡ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದರು. ಆದರೆ ಈಗ ಮತ್ತೆ ಜಿಲ್ಲಾ ವಿಭಜನೆಯ ಕೂಗು ಹೆಚ್ವಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಗೋಕಾಕ, ಚಿಕ್ಕೋಡಿ ನೂತನ ಜಿಲ್ಲೆಯಾಗಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆ ಪ್ರಧಾನಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ. ನಾನು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಣಗಳಿರುವುದರಿಂದ ಫಲಿತಾಂಶ ನಮ್ಮ ವಿರುದ್ಧವಾಗಿ ಜನರು ತೀರ್ಪು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಯಾವ ಬಣವೂ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ವರ್ಚಸ್ಸಿನ ಮೇಲೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ