Latest

ಚುರುಕುಗೊಂಡ ಆಪರೇಷನ್ ಕಮಲ; ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದರೆ ಇನ್ನೊಂದೆಡೆ ಬಿಜೆಪಿಯಲ್ಲಿ ಭಿನ್ನಮಾ ಭುಗಿಲೆದ್ದಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಆಪರೇಷನ್ ಕಮಲ ಆರಂಭವಾಗಿದೆ. ಇಂದು ಕಾಂಗ್ರೆಸ್ ಮುಖಂಡರೊಬ್ಬರು ಬಿಜೆಪಿಗೆ ಸೇರ್ಪದೆಯಾಗಿದ್ದಾರೆ.

ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರಾಗಿದ್ದ ತಿಮ್ಮನಂಜಯ್ಯ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

Home add -Advt

ಟಿ.ದಾಸರಹಳ್ಳಿಯ ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನಲೆಯಲ್ಲಿ ಬಡವರಿಗೆ ದಿನಸಿ, ತರಕಾರಿ, ಊಟ ವಿತರಿಸುತ್ತಿದ್ದು, ಈ ಕಾರ್ಯಕ್ರಮದ ನಡುವೆಯೇ ಆಪರೇಷನ್ ಕಮಲ ಚುರುಕುಗೊಳಿಸಿದ್ದಾರೆ. ಕಾಂಗ್ರೆಸ್ ಮುಖಂಡ ತಿಮ್ಮನಂಜಯ್ಯ ಅವರನ್ನು ಬಿಜೆಪಿ ಸೇರ್ಪಡೆಮಾಡಿಕೊಂಡಿದ್ದು, ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

Related Articles

Back to top button