National

*ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ*

ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ, ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಮಹತ್ವದ ಹೇಳಿಕೆ ನೀಡಿದೆ.

Home add -Advt

ಭಾರತೀಯ ವಾಯುಪಡೆ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು. ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

ಇನ್ನು ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯವನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಿದೆ. ಈ ಕಾರ್ಯಾಚರಣೆಯನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯೋಜಿತ ಮತ್ತು ರಹಸ್ಯ ರೀತಿಯಲ್ಲಿ ನಡೆಸಲಾಯಿತು ಎಂದು ಮಾಹಿತಿ ನೀಡಿದೆ.

Related Articles

Back to top button