Latest

ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಯ ಪ್ರಾರಂಭೋತ್ಸವ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ದೆಹಲಿಯ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಯ ಪ್ರಾರಂಭೋತ್ಸವ ಇದೇ ಶುಕ್ರವಾರ (ಸೆ.18) ನಡೆಯಲಿದೆ ಎಂದು ಕರ್ನಾಟಕದ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಅಂದು ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೂಜೆ ನೆರವೇರಿಸುವರು. ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆವಹಿಸುವರು.

ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರುಗಳಾದ ಡಿ,ವಿ.ಸದಾನಂದ ಗೌಡ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಅವರ ಘನ ಉಪಸ್ಥಿತಿ ಇರಲಿದೆ. ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕೇಂದ್ರ ಸಚಿವ ಸುರೇಶ ಅಂಗಡಿ, ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕರ್ನಾಟಕದ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button