
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನಿರ್ಮಾಣಗೊಂಡಿರುವ ಗ್ರಾಮೀಣ ಕಾಂಗ್ರೆಸ್ ಭವನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ, ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಶಾಸಕರೂ ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಜಿಲ್ಲಾ ಕಾಂಗ್ರೆಸ್ ಅಧ್ಯ.ಕ್ಷ ವಿನಯ ನಾವಲಗಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಕಾಂಗ್ರೆಸ್ ಭವನ ತಲೆಎತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ