*ಪುರುಷರಿಗಾಗಿ ಪ್ರತ್ಯೇಕ ಬಸ್ ಓಡಿಸಿ*; *ಬೆಳಗಾವಿಯಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್‌ಗಳು ಸಂಪೂರ್ಣ ಭರ್ತಿಯಾಗುತ್ತಿವೆ. ಇದರಿಂದ ಪುರುಷ ಪ್ರಯಾಣಿಕರು ಬಸ್‌ಗಳಲ್ಲಿ ಪ್ರಯಾಣಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪುರುಷ ಪ್ರಯಾಣಿಕರಿಗಾಗಿ ಪ್ರತ್ಯೇಕ ಬಸ್‌ಗಳನ್ನು ಓಡಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್ ಬಡಿಗೇರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ರಾಜ್ಯ ಸರ್ಕಾರದ … Continue reading *ಪುರುಷರಿಗಾಗಿ ಪ್ರತ್ಯೇಕ ಬಸ್ ಓಡಿಸಿ*; *ಬೆಳಗಾವಿಯಲ್ಲಿ ಪ್ರತಿಭಟನೆ*