Politics

*ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3,00,00,000 ರೂ.ಗಳ ಮೊತ್ತದ ಚೆಕ್ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂದು 17,21,56, 839 ರೂ.ಗಳ ಸಾಮಾನ್ಯ ಡಿವಿಡೆಂಡ್, 68,69,00,000 ರೂ.ಗಳ ವಿಶೇಷ ಡಿವಿಡೆಂಡ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3,00,00,000 ರೂ.ಗಳ ಮೊತ್ತದ ಚೆಕ್ ನ್ನು ಕೈಗಾರಿಕಾ ಸಚಿವ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಎನ್ .ಮಂಜುಳಾ, ಖುಷ್ಬೂ ಗೋಯಲ್ ಚೌಧರಿ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button