GIT add 2024-1
Laxmi Tai add
Beereshwara 33

ಕಾರ್ಯಾಚರಣೆ ಯಶಸ್ವಿ: ಸುರಕ್ಷಿತವಾಗ ಹೊರಬಂದ ಸಾತ್ವಿಕ್

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಮಗುವನ್ನು ರಕ್ಷಣಾ ಸಿಬ್ಬಂದಿಗಳು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದೆ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅಂತಿಮವಾಗಿ ಮಗುವನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

Emergency Service

ಕೊಳವೆ ಬಾವಿಯ ಪಕ್ಕದಲ್ಲಿ ಅಡ್ಡಲಾಗಿ ಸುರಂಗ ಕೊರೆದು ಮಗುವನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯಿತು. ಮಗು 20 ಅಡಿ ಆಳದಲ್ಲಿ ಸಿಲುಕಿಕೊಂಡಿತ್ತು. ಇಂದು ಬೆಳಗ್ಗೆ ಬಾವಿಯಲ್ಲಿ ಮಗು ಅಳುತ್ತಿರುವ ಶಬ್ಧ ಕೇಳುತ್ತಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದರು.

ಘಟನಾ ಸ್ಥಳದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕೊಳವೆ ಬಾವಿಗೆ ಬಿದ್ದಿರುವ ಮಗು ಸುರಕ್ಷಿತವಾಗಿ ಹೊರಬಂದಿದ್ದು, ಪ್ರಥಮ ಚಿಕಿತ್ಸೆ ನಂತರ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ.

Bottom Add3
Bottom Ad 2