ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ೨೦೨೨-೨೩ ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ತಿರಸ್ಕೃತಗೊಂಡ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ..
೨೦೨೨-೨೩ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಿಮಾ ಸಂಸ್ಥೆಯಿಂದ ತಿರಸ್ಕೃತವಾದ ಒಟ್ಟು ೩೩೬೭ ಹಾಗೂ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಿಮಾ ಸಂಸ್ಥೆಯಿಂದ ತಿರಸ್ಕೃತವಾದ ಒಟ್ಟು ೬೪೮ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರಕ್ಕಾಗಿ ಲೆಕ್ಕ ಹಾಕಲಾಗಿದೆ.
ತಾಳೆಯಾಗದೆ ಇರುವ ವಿಮೆ ಪ್ರಸ್ತಾವನೆಗಳನ್ನು ಸಕಾರದ ಆದೇಶದಂತೆ ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು. ತಾಲೂಕು ಮಟ್ಟದ ಅಧಿಕಾರಿಗಳು ಈ ಪ್ರಸ್ತಾವನೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಸಂಬಂಧಪಟ್ಟ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಪರಿಶೀಲಿಸಿ ಸ್ವೀಕೃತ ಅಥವಾ ತಿರಸ್ಕೃತಮಾಡಿರುತ್ತಾರೆ.
ರೈತರು ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಮನವರಿಕೆ ಮಾಡಿಕೊಂಡು ಆಕ್ಷೇಪಣೆ ಇದ್ದಲ್ಲಿ ಮರು ಪರಿಶೀಲಿಸಲು ಮನವಿಗಳನ್ನು ೧೫ ದಿನಗಳ ಒಳಗಾಗಿ ತಮ್ಮ ಆಕ್ಷೇಪಣೆಗಳನ್ನು ವಿಮೆ ಮಾಡಿದ ಬೆಳೆ ಬಗ್ಗೆ
೨೦೨೨-೨೩ ರ ಪಹಣಿಯಲ್ಲಿ (ಖಖಿಅ) ವಿಮೆಗೆ ನೊಂದಾಯಿಸಿದ ಬೆಳೆ ನಮೂದಾಗಿರಬೇಕು, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಸೀದಿ ಸಲ್ಲಿಸಬೇಕು. ವಿಮೆಗೆ ನೊಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ದಾಖಲೆ ಸಲ್ಲಿಸಬೇಕು.
ಸದರಿ ದಾಖಲೆಗಳನ್ನು ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸಹಾಯಕ ಕೃಷಿ/ತೋಟಗಾರಿಕೆ ನಿರ್ದೇಶಕರ ಕಛೇರಿಗಳಿಗೆ ಸಲ್ಲಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ