
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ವಿಚಾರಣೆ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಠಾಣೆಯ ಸುತ್ತಲೂ ಶಾಮಿಯಾನ ಹಾಕಿ ಠಾಣೆಯ ಒಳಗೆ ನಡೆಯುವ ಯಾವುದೇ ಚಟುವಟಿಕೆಗಳು ಕಾಣದಂತೆ ಕ್ರಮ ಕೈಗೊಳ್ಳಲಾಗಿದೆ.
ದರ್ಶನ್ ಅಭಿಮಾನಿಗಳು ಪೊಲೀಸ್ ಠಾಣೆಯ ಬಳಿ ಜಮಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸುತ್ತ 5 ದಿನಗಳ ಕಾಲ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.