Uncategorized

*66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಒಬ್ಬನೇ ಒಬ್ಬ ಶಾಸಕನಿಗೂ ಇಲ್ಲ; ರಾಜ್ಯ ಬಿಜೆಪಿ ಕಾಲೆಳೆದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾದರೂ ಇನ್ನೂ ಬಿಜೆಪಿಯಿಂದ ವಿಪಕ್ಷ ನಾಯಕನ ಆಯ್ಕೆಯಾಗದ ಹಿನ್ನೆಲೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.

ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಶಾಸಕ ಕೂಡ ಇಲ್ಲದಿರುವುದು ನಾಚಿಕೆಗೇಡು. ರಾಜ್ಯದ ಇತಿಹಾಸದಲ್ಲಿಯೇ ವಿಪಕ್ಷನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ ಇದು ಎಂದು ಲೇವಡಿ ಮಾಡಿದೆ.

ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಿರಲಿಲ್ಲ. ಈಗ ವಿಪಕ್ಷದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸುತ್ತಿಲ್ಲ ಎಂದು ಕಾಲೆಳೆದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button