Kannada NewsKarnataka NewsLatestPolitics

*ಬೆಂಗಳೂರಿನಲ್ಲಿ ವಿಪಕ್ಷನಾಯಕರ ಮಹಾ ಮೈತ್ರಿಕೂಟ ಸಭೆ; 40ಕ್ಕೂ ಹೆಚ್ಚು ಘಟಾನುಘಟಿ ನಾಯಕರ ಆಗಮನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ವಿಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಈಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿ ಹಾಕಲು ವಿಪಕ್ಷ ನಾಯಕರು ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಲೋಕಸಭಾ ಚುನಾವಣೆಗೆ ಕರ್ನಾಟಕದಿಂದಲೇ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿ ಕೂಟ ಸಭೆ ನಡೆಯಲಿದೆ.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮಹಾ ಮೈತ್ರಿಕೂಟ ನಾಯಕರ ಸಭೆ ನಡೆಯಲಿದ್ದು, ರಾಜ ರಾಜಧಾನಿಯಯ ಚಿತ್ರಣವೇ ಬದಲಾಗಿದೆ. ಕುಮಾರಕೃಪಾ ರಸ್ತೆಯ ಎರಡೂಕಡೆಗಳಲ್ಲಿ ವಿಪಕ್ಷ ನಾಯಕರ ಬೃಹತ್ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

ಸಭೆಗೆ 24 ಪಕ್ಷಗಳ 49 ನಾಯಕರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಹೆಚ್.ಎ ಎಲ್ ಗೆ ಬಂದಿಳಿಯಲಿರುವ ನಾಯಕರು, ಬಳಿಕ ನೇರವಾಗಿ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಲಿದ್ದಾರೆ. ವಿಪಕ್ಷನಾಯಕರನ್ನು ಬರಮಾಡಿಕೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಪಾತ್ರವಹಿಸುತ್ತಿದೆ.

ಈಗಾಗಲೇ ವಿಪಕ್ಷಗಳ ಕೆಲ ಹಿರಿಯ ನಾಯಕರು ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಿಪಿಐಎಂನ ಸೀತಾರಾಮ್ ಯೆಚೂರಿ ಮೊದಲಾದವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಇನ್ನು ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ. ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಪಂಜಾಬ್ ಸಿಎಂ ಭಗವಂತ್ ಮಾನ್, , ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಶಿವಸೇನೆಯ ಉದ್ಧವ್ ಠಾಕ್ರೆ, ಜಮ್ಮು-ಕಾಶ್ಮೀರದ ಮಾಜಿಸಿಎಂ ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲ, ಸಿಪಿಐ ನ ಡಿ ರಾಜಾ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮಣಿಸಲು ಕರ್ನಾಟಕದಿಂದಲೇ ರಣತಂತ್ರ ರೂಪಿಸಲು ವಿಪಕ್ಷ ನಾಯಕರು ಸಜ್ಜಾಗಿದ್ದು, ಯಾವೆಲ್ಲ ರೂಪುರೇಷೆ ಸಿದ್ಧಪಡಿಸಲಿದ್ದಾರೆ ಕಾದುನೋಡಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button