Uncategorized

*ನಾಳೆಯಿಂದ 2 ದಿನ ಬೆಂಗಳೂರಿನಲ್ಲಿ ಮಹಾ ಮತ್ರಿಕೂಟದ ಸಭೆ; ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ವಿಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮತ್ರಿ ಕೂಟದ ಸಭೆ ನಡೆಯಲಿದೆ.

ಜುಲೈ 17 ಹಾಗೂ 18ರಂದು ಬೆಂಗಳೂರಿನಲ್ಲಿ ಮಹಾ ಮೈತ್ರಿ ಕೂಟದ ಸಭೆ ಏರ್ಪಡಿಸಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆಗೆ ಬರದ ಸಿದ್ಧತೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್, ಟಿಎಂಶಿ, ಡಿಎಂಕೆ, ಎನ್ ಸಿಪಿ, ಶಿವಸೇನೆ, ಜೆಡಿಯು ಸೇರಿದಂತೆ ಹಲವು ಪಕ್ಷಗಳ ಮುಖಂಡರು ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ರಸ್ತೆಯ ಇಕ್ಕೆಲಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ಮಾಡಲಾಗಿದ್ದು, ಮಲ್ಲಿಕಾರ್ಜುನ ಖರ್ಗೆ, ಎಂ.ಕೆ.ಸ್ಟಾಲಿನ್, ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಉದ್ಧವ್ ಠಾಕ್ರೆ ಸೇರಿದಂತೆ ವಿಪಕ್ಷ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದು, ಪಕ್ಷದ ಮುಖಂದರಿಂದ ಸಭೆ ಸಿದ್ಧತೆ ಕೈಗೊಳ್ಳಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button