Belagavi NewsBelgaum NewsKannada NewsKarnataka News

*ಹಲವು ಜಿಲ್ಲೆಗೆ ಆರೆಂಜ್, ಯೆಲ್ಲೋ ಅಲರ್ಟ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಹವಾಮಾನ ಇಲಾಖೆಯು  ಭಾರೀ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 

Home add -Advt

ಇದೇ ವೇಳೆ ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಮಳೆಯ ವಾತಾವರಣ ಕಂಡುಬರಲಿದ್ದು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಬೆಳಗಾವಿ, ಕಲಬುರಗಿ, ಯಾದಗಿರಿ ಮತ್ತು ಬೀದರ್ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಒಣಹವೆ ಮುಂದುವರಿಯಲಿದ್ದು, ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಮೋಡಕವಿದ ವಾತಾವರಣ ಇರಲಿದ್ದು ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. 

Related Articles

Back to top button