
ಪ್ರಗತಿವಾಹಿನಿ ಸುದ್ದಿ; ಮುಂಬೈ: ಕಾಮಪಿಪಾಸುಗಳು ಎಳೆ ಕಂದಮ್ಮಗಳನ್ನೂ ಬಿಡುತ್ತಿಲ್ಲ. ಅಪ್ರಾಪ್ತ ಬಾಲಕರು ಮೂರು ವರ್ಷದ ಕಂದಮ್ಮನ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘೋರ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ.
ಮುಂಬೈನ ಕಸ್ತೂರ್ಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಬಾಲಕರನ್ನು ಬಂಧಿಸಲಾಗಿದೆ. ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇತ್ತಿಚಿನ ದಿನಗಳಲ್ಲಿ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅಪ್ರಾಪ್ತ ಬಾಲಕರೇ ಇಂತಹ ಹೀನ ಕೃತ್ಯಗಳನ್ನು ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.