CrimeKannada NewsLatest

*ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಮಗ*

ಪ್ರಗತಿವಾಹಿನಿ ಸುದ್ದಿ: ಸ್ಟೀಲ್ ರಾಡ್ ನಿಂದ ಹೊಡೆದು ತಂದೆಯನ್ನು ಮಗ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಈ ಘತನೆ ನಡೆದಿದೆ. ರಂಜಿತ್ (೨೮) ತಂದೆಯನ್ನು ಕೊಲೆಗೈದ ಮಗ. ಸತೀಶ್ (60) ಕೊಲೆಯಾದ ತಂದೆ.

ತಂದೆ ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡುತ್ತಿರಲಿಲ್ಲ. ಅಲ್ಲದೇ ಅಕ್ರಮ ಸಂಬಂಧವಿತ್ತು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ತಂದೆ-ಮಗನ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ತಾಯಿ ನಿರ್ಮಲಾ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು.

ಇಂದು ಕೂಡ ತಂದೆ-ಮಗನ ನಡುವೆ ಜಗಳ ಜೋರಾಗಿದೆ. ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸ್ಟೀಲ್ ರಾಡ್ ನಿಂದ ಮಗ, ತಂದೆಯ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button