Kannada NewsKarnataka NewsLatest

ಸತೀಶ ಬೆಂಬಲಕ್ಕೆ ನಿಂತ ಸಂಘಟನೆಗಳು; ತೇಜೋವಧೆ ಖಂಡಿಸಿ ಇಂದು ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಹಿಂದೂ’ ಪದದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಹೇಳಿಕೆಗಳು ವಿವಾದಕ್ಕೆ ಗುರಿಯಾಗಿ ಕೊನೆಗೆ ಸತೀಶ ಜಾರಕಿಹೊಳಿಯವರು ಕ್ಷಮೆ ಯಾಚಿಸಿದ ಬೆನ್ನಲ್ಲೇ ಕೆಲ ಸಂಘಟನೆಗಳು ಅವರ ಬೆಂಬಲಕ್ಕೆ ನಿಂತಿವೆ.

ಸತೀಶ ಜಾರಕಿಹೊಳಿ ಅವರು ನೀಡಿದ ಹೇಳಿಕೆ ತಿರುಚಿ ಅವರ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಮಾನವ ಬಂಧುತ್ವ ವೇದಿಕೆ, ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಿಪ್ಪಾಣಿಯಲ್ಲಿ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ.

Home add -Advt

ಜಿಲ್ಲೆಯ ಹಲವು ಪ್ರಗತಿಪರ ಸ್ವಾಮೀಜಿಗಳು ಈ ಪ್ರತಿಭಟನೆಯನ್ನು ಬೆಂಬಲಿಸಿ ಪಾಲ್ಗೊಳ್ಳಲಿದ್ದಾರೆ.

ಖಾನಾಪುರ ತಾಲೂಕಿನಲ್ಲಿ 2 ವಿದ್ಯಾರ್ಥಿ ನಿಲಯ – CM ಘೋಷಣೆ

Related Articles

Back to top button