ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಸಂಪರ್ಕ ಹೊಂದಿರುವ, ಉತ್ತರ ಕರ್ನಾಟಕದ ಹೃದ ಭಾಗದಂತಿರುವ ಬೆಳಗಾವಿಯಲ್ಲಿ ಮಾದರಿ ಐಟಿ (ಮಾಹಿತಿ ತಂತ್ರಜ್ಞಾನ ) ಪಾರ್ಕ್ ಸ್ಥಾಪಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ರಾಜ್ಯ ಉಪಮುಖ್ಯಮಂತ್ರಿಯೂ ಆಗಿರುವ ಮಾಹಿತಿ-ತಂತ್ರಜ್ಞಾನ ಸಚಿವ ಅಶ್ವತ್ಥ ನಾರಾಯಣಗೆ ಶಾಸಕ ಅಭಯ ಪಾಟೀಲ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಅಶ್ವತ್ಥ ನಾರಾಯಣ ಅವರನ್ನು ಭೇಟಿ ಮಾಡಿರುವ ಅಭಯ್ ಪಾಟೀಲ, ಈ ಸಂಬಂದ ಉನ್ನತ ಅಧಿಕಾರಿಗಳು ಹಾಗೂ ಐಟಿ ಕಂಪನಿಗಳ ಮುಖ್ಯಸ್ಥರ ಸಭೆ ಆಯೋಜಿಸುವಂತೆ ಕೋರಿದ್ದಾರೆ.
ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಒತ್ತಾಯಿಸುತ್ತ ಬಂದಿದ್ದೇನೆ. ಸದನದಲ್ಲೂ ಈ ಕುರಿತು ಚರ್ಚಿಸಲಾಗಿದೆ. ಆದರೆ ಕಾರ್ಯರೂಪಕ್ಕೆ ಬಂದಿಲ್ಲ. ಬೆಳಗಾವಿ ಎಲ್ಲ ರೀತಿಯ ಸಾರಿಗೆ, ವಿಮಾನ, ರೈಲು ಸಂಪರ್ಕಗಳನ್ನು ಹೊಂದಿದೆ. ಇ್ಲಲಿಯ ಹವಾಮಾನವೂ ಉತ್ತಮವಾಗಿದೆ. ಹಲವಾರು ಕಂಪನಿಗಳು ಮಾಹಿತಿ ತಂತ್ರಜ್ಞಾನ ಕೇದ್ರ ಸ್ಥಾಪಿಸಲು ಆಸಕ್ತಿ ತೋರಿಸಿವೆ. ಆದರೆ ಸರಕಾರದಿಂದ ಕೆಲವು ಸೌಭ್ಯಗಳನ್ನು ಅಪೇಕ್ಷಿಸುತ್ತಿದ್ದಾರೆ.
ಹಾಗಾಗಿ ಈ ಬಗ್ಗೆ ಚರ್ಚಿಸಲು ತಕ್ಷಣ ಉನ್ನತಮಟ್ಟದ ಸಭೆ ಆಯೋಜಿಸಬೇಕು ಎಂದು ಅಭಯ ಪಾಟೀಲ ವಿನಂತಿಸಿದರು. ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ