Latest

*ಭೀಕರ ಅಪಘಾತ; ತಿರುಪತಿಗೆ ಹೊರಟಿದ್ದ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಸುರೇಶ್ (45), ಐಶ್ವರ್ಯ (22) ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದರೆ ಪ್ರಮಿಳಾ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ನಾಲ್ವರೂ ಹಾವೇರಿಯ ಅಶ್ವಿನಿ ನಗರ ನಿವಾಸಿಗಳು. ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದರು. ಮಧ್ಯರಾತ್ರಿ 12:30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

Related Articles

Back to top button