ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸುಮಾರು 108.36 ಕೋಟಿ ವೆಚ್ಚದಲ್ಲಿ ಸುಮಾರು 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಗಳ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.
ಜೊತೆಗೆ ಸುಮಾರು 39.37 ಕೋಟಿ ವೆಚ್ಚದಲ್ಲಿ ಉಡುಪಿ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಹಾಗೂ ವಿಜಯಪುರ ತೀವ್ರ ನಿಗಾ ಆರೈಕೆ ಘಟಕಕ್ಕೆ ಅಗತ್ಯವಿರುವ ಉಪಕರಣ ಖರೀದಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.
ಅಲ್ಲದೇ ಈ ಹಿಂದೆ 16 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆಗೊಂಡಿದ್ದ ಚಿಕ್ಕಬಳ್ಳಾಪುರದ 50 ಹಾಸಿಗೆಯ ತೀವ್ರ ನಿಗಾ ಆರೋಗ್ಯ ಘಟಕವನ್ನು ಚಿಂತಾಮಣಿ ತಾಲ್ಲೂಕಿಗೆ ಸ್ಥಳಾಂತರಿಸಲು ಅನುಮೋದನೆ ಸಿಕ್ಕಿದ್ದು, ನಿರ್ಮಾಣ ವೆಚ್ಚ 16.63 ಕೋಟಿ ತಿದ್ದುಪಡಿಗೆ ಸಂಪುಟ ಅನುಮೋದನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ