Belagavi NewsBelgaum NewsKannada NewsKarnataka News
*ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಮ್ಮ ಕ್ಲಿನಿಕ್ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಬಸ್ ನಿಲ್ದಾಣದಲ್ಲಿ ಒದಗಿಸಲಾದ ಸುಸಜ್ಜಿತ ಕೊಠಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ನಮ್ಮ ಕ್ಲೀನಿಕ್ ಉದ್ಘಾಟನೆ ಕಾರ್ಯಕ್ರಮ ಜರುಗಿಸಲಾಯಿತು.
ಈ ವೇಳೆ ವಾಕರಸಾ ಸಂಸ್ಥೆಯ ಉಪಾಧ್ಯಕ್ಷ ಸುನೀಲ್ ಹನಮನ್ನವರ, ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್ ಗುಡೆನ್ನವರ, ತಾಲೂಕ ಆರೋಗ್ಯ ಅಧಿಕಾರಿ ರಮೇಶ ದಂಡಗಿ ಮತ್ತು ಸಾರಿಗೆ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.




