Belagavi NewsBelgaum NewsKannada NewsKarnataka NewsPolitics

*ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಸಂವಿಧಾನವೇ ಆಧಾರ ಸ್ತಂಭ: ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟçದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಹಾಗೂ ಶ್ರೀ ಮಹಾಲಕ್ಷ್ಮೀ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಕಚೇರಿಯಲ್ಲಿ ಭಾರತ ಮಾತೆ, ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಮಹಾತ್ಮ ಗಾಂಧಿಯವರ ‘ಸರ್ವೋದಯ’ದ ಕಲ್ಪನೆಯು ಎಲ್ಲರನ್ನು, ವಿಶೇಷವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯನ್ನು ಕಲ್ಪಿಸಿ ಕೊಂಡಿತ್ತು. ದೀನದಯಾಳ್ ಉಪಾಧ್ಯಾಯ ಅವರ ‘ಏಕಾತ್ಮ ಮಾನವವಾದ’ವು ಅಭಿವೃದ್ಧಿ ವಿಚಾರದಲ್ಲಿ ಸಮಗ್ರ, ಮಾನವ ಕೇಂದ್ರಿತ ಕಾರ್ಯವಿಧಾನವನ್ನು ನಿರೂಪಿಸಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಸಬ್ ಕಾ ಸಾಥ್ ಸಭ್ ಕಾ ವಿಕಾಸ್’ ದೃಷ್ಟಿಕೋನವು ಎಲ್ಲರನ್ನೂ ಒಳಗೊಂಡ, ಜನ ಕೇಂದ್ರಿತ ಆಡಳಿತಕ್ಕೆ ಶಾಶ್ವತವಾದ ಸೈದ್ಧಾಂತಿಕ ಬದ್ಧತೆಯನ್ನು ಪ್ರತಿಧ್ವನಿಸುತ್ತದೆ. ದುರ್ಬಲ ಮತ್ತು ಅತ್ಯಂತ ದುರ್ಬಲರ ಏಳಿಗೆಗೆ ಆದ್ಯತೆ ನೀಡುವ ಮೂಲಕ ಸರಕಾರವು ಸಕ್ರಿಯವಾಗಿ ‘ಜನರಿಗಾಗಿ’ ಕೆಲಸ ಮಾಡುವ ಈ ಬದ್ಧತೆಯು ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಗಮನಾರ್ಹ ಫಲಿತಾಂಶಗಳನ್ನು ನೀಡಿದೆ ಎಂದರು.

Home add -Advt

ಭಾರತವು ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತದಲ್ಲಿ 26.7 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ. ಜಗತ್ತು ಭಾರತವನ್ನು ನೋಡುವ ದೃಷ್ಠಿಕೋನ ಬದಲಾಗಿದೆ. ಭಾರತದ ಈ ಪರಂಪರೆಯನ್ನು ಮುಂದುವರೆಸುವ ಭಾರತದ ಸ್ವಾಭಿಮಾನವನ್ನು ಎತ್ತಿ ಹಿಡಿಯುವ ಕಾರ್ಯವನ್ನು ಭಾರತೀಯರಾದ ನಾವೆಲ್ಲರೂ ಮುಂದುವರೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು. 

ಸಹಕಾರಿ ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸತೀಶ ಕಡಾಡಿ. ನಿರ್ದೇಶಕರಾದ ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಗುರುನಾಥ ವ್ಯಾಪಾರಿ, ಸಿದ್ದಪ್ಪ ಹೆಬ್ಬಾಳ, ಸೋಮನಿಂಗ ಹಡಗಿನಾಳ, ಪ್ರಭು ಕಡಾಡಿ, ತುಕಾರಾಮ ಪಾಲ್ಕಿ, ಗುರುನಾಥ ಮದಭಾಂವಿ, ದಶಗೀರ ಕಮತನೂರ, ಬಸವರಾಜ ದಾಸನಾಳ, ಅಶೋಕ ತಳವಾರ, ಉದ್ದಪ್ಪ ಪೂಜೇರಿ, ಪರಪ್ಪ ಗಿರೆಣ್ಣವರ, ಶಂಕರ ಕೌಜಲಗಿ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರೂ ಉಪಸ್ಥಿತರಿದ್ದರು.

Related Articles

Back to top button