Kannada NewsKarnataka NewsLatest

ಬೆಳಗಾವಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ: ಫೇಸ್ ಬುಕ್ ಖಾತೆಗಳ ವಿರುದ್ಧ FIR

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಆರೋಪದ ಮೇಲೆ ಎರಡು ಫೇಸ್ ಬುಕ್ ಖಾತೆಗಳ ವಿರುದ್ಧ ಇಲ್ಲಿನ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಅವರು ನೀಡಿದ ದೂರಿನನ್ವಯ ಮಲ್ಲಿಕಾರ್ಜುನ ಸಾವಕಾರ ಹಾಗೂ ಸ್ವಾಭಿಮಾನಿ ಶೆಟ್ಟರ ಎಂಬ ಹೆಸರಿನ ಫೇಸ್ಬುಕ್ ಅಕೌಂಟ್ ಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 153ಬಿ, 171 ಜಿ, 505(2) ಹಾಗೂ RP 125 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ಫೇಸ್ಬುಕ್ ಪುಟಗಳಿಂದ ‘ಲಿಂಗಾಯತ ಸಮಾಜದ ವಿರುದ್ಧ ಬಿ.ಎಲ್. ಸಂತೋಷ ಅವರು ಮಾತನಾಡಿದ್ದಾರೆ’ ಎಂಬ ಸುಳ್ಳು ಮಾಹಿತಿಯನ್ನು ಹರಿಬಿಟ್ಟು ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವ ಹಾಗೂ ರಾಷ್ಟ್ರೀಯ ನಾಯಕರೊಬ್ಬರ ವಿರುದ್ಧ ಒಂದು ದೊಡ್ಡ ಸಮಾಜವನ್ನು ಎತ್ತಿ ಕಟ್ಟುವ ಹುನ್ನಾರ ಹಾಗೂ ರಾಜಕೀಯ ಷಡ್ಯಂತ್ರ ರಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Home add -Advt

ಜಾತಿ ಜಾತಿಗಳ ಮಧ್ಯೆ ಇಂಥ ಕುಕೃತ್ಯದಿಂದ ವಿಷಬೀಜ ಬಿತ್ತಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಈ ಎರಡೂ ಫೇಸ್ ಬುಕ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

https://pragati.taskdun.com/jds-candidatemunegowdacheating-case/
https://pragati.taskdun.com/the-water-of-kaveri-and-krishna-rivers-is-not-enough-to-wash-away-the-sin-committed-by-bjp-siddaramaiah/
https://pragati.taskdun.com/application-invitation-for-various-training/
https://pragati.taskdun.com/application-invitation-for-various-training/

Related Articles

Back to top button