![](https://pragativahini.com/wp-content/uploads/2020/10/firing1.jpg)
ಪ್ರಗತಿವಾಹಿನಿ ಸುದ್ದಿ; ಲಕ್ನೋ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಪಾಲಾಗಿದ್ದ ಆರೋಪಿ ಜಾಮೀನಿನ ಮೇಲೆ ಹೊರಬಂದು ದೂರು ನೀಡಿದ್ದ ಯುವತಿಯ ತಂದೆಯನ್ನೇ ಗುಂಡಿಟ್ಟು ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ.
2018ರಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದ ಪ್ರಕರಣ ಸಂಬಂಧ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿ ಜಾಮೀನಿನ ಮೂಲಕ ಹೊರಬಂದಿದ್ದಾನೆ. ದೂರುದಾರ ವ್ಯಕ್ತಿ ಕುಟುಂಬ ಸಮೇತ ದೇವಸ್ಥಾನಕ್ಕೆ ಹೋಗಿದ್ದಾಗ ಆರೋಪಿ ದೂರುದಾರ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ.
ಆರೋಪಿಯನ್ನು ಗೌರವ್ ಶರ್ಮಾ ಎಂದು ಗುರುತಿಸಲಾಗಿದ್ದು, ಆರೋಪಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ