Belagavi NewsBelgaum NewsHealthKannada NewsKarnataka News
*ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾಗಿ ಚಿಕಿತ್ಸೆ ಪಡೆದು ಮರಳಿ ಮನೆಗೆ ತೆರಳಿರುವ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ನಡೆದಿದೆ.
ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದರಿಂದ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30 ಕ್ಕೂ ಅಧಿಕ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ.
ಘಟನೆಯ ಮಾಹಿತಿ ಪಡೆದು ಖಾಸಗಿ ಆಸ್ಪತ್ರೆಗೆ ಡಿಎಚ್ಓ ಡಾ.ಈಶ್ವರ ಗಡಾದಿ ಹಾಗೂ ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಲ ಗಂಟೆ ಚಿಕಿತ್ಸೆ ನೀಡಿದ ಬಳಿಕ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ, ಯಾವುದೇ ರೀತಿಯ ಸಮಸ್ಯೆ ಆಗಿಲ್ಲ. ಹಾಗಾಗಿ ಎರಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30ಕ್ಕೂ ಅಧಿಕ ಮಕ್ಕಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.