Kannada NewsKarnataka NewsNational

*ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ವೊಂದು ಪಲ್ಟಿಯಾಗಿಗುವ ಘಟನೆ ಚಾರ್ಮಾಡಿ ಘಾಟ್ ನ ಅಲೇಕಾನ್ ಬಳಿ ಈ ಘಟನೆ ನಡೆದಿದೆ.

ಮಂಗಳೂರಿನಿಂದ ಚಿಕ್ಕಮಗೂರಿನಿಂದ ಸಾಗುತ್ತಿದ್ದ ಪೆಟ್ರೋಲ್ ಟ್ಯಾಂಕ‌ರ್ ಅಲೇಕಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಟ್ಯಾಂಕರ್ ನಲ್ಲಿ ಮಂಗಳೂರಿನಿಂದ 8 ಸಾವಿರ ಲೀಟರ್ ಪೆಟ್ರೋಲ್ ಹಾಗೂ 4 ಸಾವಿರ ಲೀಟರ್ ಡೀಸೆಲ್ ಅನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಸೋರಿಕೆಯಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬನಕಲ್ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button