
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ 22 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಧಾರುಣವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಕೊರತೆ ವಿಷಯ ತಿಳಿಯುತ್ತಿದ್ದಂತೆ 50 ಜಂಬೋ ಆಕ್ಸಿಜನ್ ಸಿಲಿಂಡರ್ ಕಳುಹಿಸಿಕೊಡುವ ವ್ಯವಸ್ಥೆಯನ್ನು ಸಂಸದ ಪ್ರತಾಪ್ ಸಿಂಹ ಮಾಡಿದ್ದಾರೆ. ಆದರೆ ಸಿಲಿಂಡರ್ ಗಳು ಬರುವಷ್ಟರಲ್ಲಿ ರೋಗಿಗಳು ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ 16 ಹಾಗೂ ಇಂದು ಮುಂಜಾನೆ 4 ರೋಗಿಗಳು ಸೇರಿ ಒಟ್ಟು 20 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಜಿಲ್ಲಾಸ್ಪತ್ರೆಯ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇರೆ ಜಿಲ್ಲೆಯವರಿಗೇಕೆ ಬೆಳಗಾವಿ ಉಸ್ತುವಾರಿ? – ರಮೇಶ್ ಕತ್ತಿ ತೀವ್ರ ಅಸಮಾಧಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ