Kannada NewsKarnataka NewsNationalPolitics

*ಅಧಿಕೃತವಾಗಿ ನಟ ವಿಜಯಗೆ ಬೆಂಬಲ ಘೋಷಿಸಿದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್ ಅಧಿಕೃತವಾಗಿ ನಿರ್ಧರಿಸಿದೆ.

ಹೊಸ ಸರ್ಕಾರ ರಚನೆಗಾಗಿ ವಿಜಯ್ ಅವರು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ಗೆ ಹೊಸ ಸಂಪುಟದಲ್ಲಿ ಎರಡು ಸಚಿವ ಸ್ಥಾನಗಳು ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು ಮೈತ್ರಿ ಬಹುತೇಕ ಖಚಿತವಾಗಿದೆ. ಹೊಸದಾಗಿ ರಚನೆಯಾಗಲಿರುವ ವಿಜಯ್ ಅವರ ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಬೆಂಬಲ ಖಚಿತಪಡಿಸಿದ ಸಂಸದ ಟಿವಿಕೆ ನೇತೃತ್ವದ ಹೊಸ ಸರ್ಕಾರ ರಚನೆಗೆ ಬೆಂಬಲ ನೀಡಲು ತಮಿಳುನಾಡು ಕಾಂಗ್ರೆಸ್ ಸಮಿತಿಗೆ ರಾಜಕೀಯ ವ್ಯವಹಾರಗಳ ಸಮಿತಿಯು ಅಧಿಕಾರ ನೀಡಿದೆ ಎಂದು ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೊದಲಿನಿಂದಲೂ ವಿಜಯ್ ಅವರ ಟಿವಿಕೆ ಪಕ್ಷವನ್ನು ಬೆಂಬಲಿಸುವ ಪರವಾಗಿದ್ದರು ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿ ನಾಯಕರ ಬದಲಿಗೆ ತಮಿಳುನಾಡು ರಾಜ್ಯ ಘಟಕವೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿ ಎಂದು ಬಯಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button